ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

Updated on: Feb 07, 2026 | 4:07 PM

ಕರ್ನಾಟಕದಲ್ಲಿ ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರದ ಸಹಕಾರವಿಲ್ಲದಿರುವುದೇ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರಶ್ನಿಸಿದ್ದು, ತೇಜಸ್ವಿ ಸೂರ್ಯ ಅವರ ಹೇಳಿಕೆಗಳನ್ನು ಖಾಲಿ ಟ್ರಂಕ್ ಮಾತು ಎಂದು ತಳ್ಳಿ ಹಾಕಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ.

ಈರಣ್ಣ ಬಸವ ಟಿವಿ9

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More