AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Feb 06, 2026 | 3:36 PM

Share

ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಆಗಿರುತ್ತಾರೆಂಬ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್​ ನೀಡಿದ್ದಾರೆ. ಯತೀಂದ್ರರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, ಅವರ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್​ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್​​​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್​ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 06, 2026 03:35 PM