ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಆಗಿರುತ್ತಾರೆಂಬ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ. ಯತೀಂದ್ರರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, ಅವರ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.
ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ಏರ್ಪೋರ್ಟ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 06, 2026 03:35 PM
Loading...
Unable to load recommendations.
Follow Us
