ಪ್ರಿಯಾಂಕಾ ಗೆದ್ದರೆ ಬಂಡೀಪುರ ರಾತ್ರಿ ಸಂಚಾರ: ತೀವ್ರ ಚರ್ಚೆಗೆ ಗ್ರಾಸವಾದ ಡಿಕೆಶಿ ಹೇಳಿಕೆ ವಿಡಿಯೋ ಇಲ್ಲಿದೆ
ಬಂಡೀಪುರದಲ್ಲಿ ರಾತ್ರಿ ಸಂಚಾರ ಆರಂಭಿಸುವ ಬಗ್ಗೆ ವಯನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಕ್ಕೆ ಪರಿಸರವಾದಿಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಏತನ್ಮಧ್ಯೆ ಡಿಕೆ ಶಿವಕುಮಾರ್ ಆ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ. ವಯನಾಡಿನ ಪಡಿಂಜರೆತಾರಾದಲ್ಲಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯ ವಿಡಿಯೋ ಇಲ್ಲಿದೆ.
ಚಾಮರಾಜನಗರ, ನವೆಂಬರ್ 13: ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡುತ್ತಿರುವ ಕೇರಳದ ವಯನಾಡಿನ ಪಡಿಂಜರೆತಾರಾದಲ್ಲಿ ಎರಡು ದಿನಗಳ ಹಿಂದೆ ನಡೆದ ಚುನಾವಣಾ ಪ್ರಚಾರದ ವೇಳೆ, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಪರಿಸರವಾದಿಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ರಾತ್ರಿ ಸಂಚಾರದಿಂದ ಪ್ರಾಣಿಗಳ ಪ್ರಾಣಕ್ಕೆ ಕುತ್ತು ಬರುತ್ತದೆ. ಅಪಘಾತ ಪ್ರಕರಣ ಹಾಗೂ ಟಿಂಬರ್ ಮಾಫಿಯಾದಂತಹ ವಿಚಾರಗಳು ಹೆಚ್ಚುತ್ತವೆ ಎಂಬ ಕಾರಣಕ್ಕೆ ನಿಟ್ಟಿನಲ್ಲಿ ಈಗಾಗ್ಲೇ ಬಂಡೀಪುರದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧ ಮಾಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ರವರೆಗೂ ತುರ್ತು ಸೇವೆ ವಾಹನಗಳು ಬಿಟ್ಟು ಉಳಿದೆಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ಆದರೆ, ಡಿಸಿಎಂ ಡಿಕೆಶಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡಬಾರದು. ಅವಕಾಶ ಮಾಡಿಕೊಟ್ಟರೆ ಗಡಿಯನ್ನು ಬಂದ್ ಮಾಡಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.
ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?
ಬಂಡಿಪುರದಲ್ಲಿ ಈಗಲೇ ರಾತ್ರಿ ಸಂಚಾರ ತೆರವು ಮಾಡುತ್ತೇನೆ ಎಂಬುದಾಗಿ ಹೇಳಿಲ್ಲ. ಎರಡೂ ರಾಜ್ಯಗಳ ಅಧಿಕಾರಿಗಳು ಚರ್ಚೆ ಮಾಡುತ್ತೇವೆ. ಸಮಾಲೋಚನೆ ನಡೆಸಿ ತೀರ್ಮಾನಕ್ಕೆ ಬಂದ ನಂತರವಷ್ಟೇ ಆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿಯ ಚರ್ಚೆ; ವನ್ಯ ಪ್ರಾಣಿಗಳ ಜೀವಕ್ಕೆ ಕಂಟಕ?
ಪ್ರಿಯಾಂಕಾ ಗೆದ್ದರೆ ಉಭಯ ರಾಜ್ಯಗಳ ಅಧಿಕಾರಿಗಳು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ