DK Shivakumar Oath Taking: ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

Updated on: Jun 03, 2026 | 9:30 AM

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನ ಸುಮನಹಳ್ಳಿಯಲ್ಲಿ 100 ಅಡಿ ಎತ್ತರದ ಬೃಹತ್ ಕಟೌಟ್ ಅಳವಡಿಸಲಾಗಿದೆ. ಅಷ್ಟೇ ಅಲ್ಲದೆ ನಗರದಾದ್ಯಂತ ಹಾಗೂ ಏರ್‌ಪೋರ್ಟ್ ಹೆದ್ದಾರಿಯುದ್ದಕ್ಕೂ ಅಭಿಮಾನಿಗಳು ಬ್ಯಾನರ್, ಫ್ಲೆಕ್ಸ್‌ಗಳನ್ನು ಹಾಕಿ ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಕಟೌಟ್ ಅಬ್ಬರದ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ. ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ, ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವ ಹೈಕಮಾಂಡ್ ಹಾಗೂ ವಿವಿಧ ರಾಜ್ಯಗಳ ಗಣ್ಯ ನಾಯಕರನ್ನು ಸ್ವಾಗತಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಹೆದ್ದಾರಿಯುದ್ದಕ್ಕೂ ಸ್ವಾಗತ ಕೋರುವ ಪ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಏರ್‌ಪೋರ್ಟ್ ಟೋಲ್ ಪ್ಲಾಜಾದಿಂದ ಹಿಡಿದು ಸಿಟಿಯವರೆಗಿನ ಹೆದ್ದಾರಿ ಬದಿಯ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ವಿವಿಧ ನಾಯಕರ ಫೋಟೋಗಳಿರುವ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಆದರೆ, ಬಿಗಿ ನಿಯಮಗಳ ನಡುವೆಯೂ ಏರ್‌ಪೋರ್ಟ್ ಹೆದ್ದಾರಿಯಾದ್ಯಂತ ಈ ರೀತಿ ರಾಜಾರೋಷವಾಗಿ ಪ್ಲೆಕ್ಸ್ ಅಳವಡಿಸಿರುವುದಕ್ಕೆ ಸಾರ್ವಜನಿಕ ವಲಯ ಹಾಗೂ ವಾಹನ ಸವಾರರಿಂದ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More