DK Shivakumar: ಉಪ-ಮುಖ್ಯಮಂತ್ರಿಯಾಗಿ ಗಂಗಾಧರ ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

DK Shivakumar: ಉಪ-ಮುಖ್ಯಮಂತ್ರಿಯಾಗಿ ಗಂಗಾಧರ ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಅರುಣ್​ ಕುಮಾರ್​ ಬೆಳ್ಳಿ
|

Updated on: May 20, 2023 | 1:57 PM

ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರಮಾಣ ವಚನವನ್ನು ಬೋಧಿಸಿದರು.

ಬೆಂಗಳೂರು: ಕನಕಪುರ ಶಾಸಕ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರ ರಾಜ್ಯದ ಉಪ-ಮುಖ್ಯಮಂತ್ರಿಯಾಗಿ (Dy CM) ಕಿಕ್ಕಿರಿದು ಜನ ನೆರೆದಿದ್ದ ಕಂಠೀರವ ಕ್ರೀಡಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರಮಾಣ ವಚನವನ್ನು ಬೋಧಿಸಿದರು. ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಂದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ನಟ ಕಮಲ್​ ಹಾಸನ್, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮೊದಲಾದವರು ಹಾಜರಿದ್ದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ