AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್

ರಮೇಶ್ ಬಿ. ಜವಳಗೇರಾ
|

Updated on: May 24, 2025 | 8:59 PM

Share

ಬೆಂಗಳೂರು ನಗರದ 25 ಲಕ್ಷ ಆಸ್ತಿಗಳನ್ನು ಈ ಖಾತಾ ಮಾಡಲು ಹೇಳಿದ್ದು, ಎಲ್ಲಾ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಈಗಾಗಲೇ 5 ಲಕ್ಷ ಆಸ್ತಿಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದನ್ನು ದೊಡ್ಡ ಅಭಿಯಾನವಾಗಿ ಮಾಡುತ್ತಿದ್ದೇವೆ. ಆ ಮೂಲಕ ತೆರಿಗೆ ಹಾಗೂ ಆಸ್ತಿ ದಾಖಲಾತಿಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ. ಇದಕ್ಕಾಗಿ ನ್ಯಾಷನಲ್ ಈ ಗವರ್ನೆನ್ಸ್ ಅವಾರ್ಡ್ ಕೂಡ ಸಿಕ್ಕಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು, (ಮೇ 24): ಆಸ್ತಿಗಳನ್ನು ಈ ಖಾತಾ ಮಾಡುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಅಪ್ಡೇಟ್​ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಬೆಂಗಳೂರು ನಗರದ 25 ಲಕ್ಷ ಆಸ್ತಿಗಳನ್ನು ಈ ಖಾತಾ ಮಾಡಲು ಹೇಳಿದ್ದು, ಎಲ್ಲಾ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಈಗಾಗಲೇ 5 ಲಕ್ಷ ಆಸ್ತಿಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದನ್ನು ದೊಡ್ಡ ಅಭಿಯಾನವಾಗಿ ಮಾಡುತ್ತಿದ್ದೇವೆ. ಆ ಮೂಲಕ ತೆರಿಗೆ ಹಾಗೂ ಆಸ್ತಿ ದಾಖಲಾತಿಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ. ಇದಕ್ಕಾಗಿ ನ್ಯಾಷನಲ್ ಈ ಗವರ್ನೆನ್ಸ್ ಅವಾರ್ಡ್ ಕೂಡ ಸಿಕ್ಕಿದೆ ಎಂದು ಮಾಹಿತಿ ನೀಡಿದರು.