ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮೇಲೆ ಚಾರ್ಜ್ ಶೀಟ್ ತಯಾರಾಗುತ್ತಿರುವ ಹೊತ್ತಿನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಭೇಟಿಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರರ ಮೇಲೆ ಚಾರ್ಜ್ ಶೀಟ್ ರೆಡಿಯಾಗುತ್ತಿರುವ ಸಮಯದಲ್ಲಿ ದರ್ಶನ್ರ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಸಹೋದರ ದಿನಕರ್ ಇಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಸುಮಾರು 20 ನಿಮಿಷಗಳ ಕಾಲ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ ವಿಜಯಲಕ್ಷ್ಮಿ ಮತ್ತು ದಿನಕರ್, ಡಿಸಿಎಂ ನಿವಾಸದಿಂದ ತೆರಳಿದರು. ಬಳಿಕ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ವಿಜಯಲಕ್ಷ್ಮಿ ಅವರು ಆಗಮಿಸಿದ ಉದ್ದೇಶ ತಿಳಿಸಿದರು. ಜೊತೆಗೆ ದರ್ಶನ್ ಪ್ರಕರಣದ ಬಗ್ಗೆಯೂ ಮಾತನಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos