ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು

|

Updated on: Jul 24, 2024 | 2:04 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಗ್ಯಾಂಗ್​ ಮೇಲೆ ಚಾರ್ಜ್ ಶೀಟ್ ತಯಾರಾಗುತ್ತಿರುವ ಹೊತ್ತಿನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಭೇಟಿಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರರ ಮೇಲೆ ಚಾರ್ಜ್ ಶೀಟ್ ರೆಡಿಯಾಗುತ್ತಿರುವ ಸಮಯದಲ್ಲಿ ದರ್ಶನ್​ರ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಸಹೋದರ ದಿನಕರ್ ಇಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಸುಮಾರು 20 ನಿಮಿಷಗಳ ಕಾಲ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ ವಿಜಯಲಕ್ಷ್ಮಿ ಮತ್ತು ದಿನಕರ್, ಡಿಸಿಎಂ ನಿವಾಸದಿಂದ ತೆರಳಿದರು. ಬಳಿಕ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ವಿಜಯಲಕ್ಷ್ಮಿ ಅವರು ಆಗಮಿಸಿದ ಉದ್ದೇಶ ತಿಳಿಸಿದರು. ಜೊತೆಗೆ ದರ್ಶನ್ ಪ್ರಕರಣದ ಬಗ್ಗೆಯೂ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ