AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ದಿಲ್ಲಿಯಲ್ಲಿ ಮೌನ ಮುರಿದ ಡಿಕೆ ಶಿವಕುಮಾರ್, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು

ಕೊನೆಗೂ ದಿಲ್ಲಿಯಲ್ಲಿ ಮೌನ ಮುರಿದ ಡಿಕೆ ಶಿವಕುಮಾರ್, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: May 29, 2026 | 2:44 PM

Share

ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ (DK Shivakumar) ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ ಸಚಿವ ಸಂಪುಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನಾಳೆ (ಮೇ 30) ಸಿಎಲ್ ಪಿ ಸಭೆ (ಕಾಂಗ್ರೆಸ್ ಶಾಸಕಾಂಗ ಸಭೆ) ಕರೆದಿದ್ದು, ಹೈಕಮಾಂಡ್ ನಾಯಕರು ವೀಕ್ಷಕರಾಗಿ ಬರಲಿದ್ದಾರೆ. ಹೀಗಾಗಿ ಯಾವುದೇ ಶಾಸಕರು ದೆಹಲಿಗೆ ಬರಬೇಡಿ ಎಂದು ಹೇಳಿದ್ದೇವೆ. ಕೆಲ ವಿಚಾರಗಳನ್ನ ಸಿದ್ದರಾಮಯ್ಯನವರ ನಾವು ಚರ್ಚೆ ಮಾಡಿದ್ದೇವೆ. ಸಿಎಲ್ ಪಿ ಬಳಿಕ ಪ್ರಮಾಣ ವಚನಕ್ಕೆ ದಿನ ನಿಗಧಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ನವದೆಹಲಿ, (ಮೇ 29): ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ (DK Shivakumar) ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ ಸಚಿವ ಸಂಪುಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನಾಳೆ (ಮೇ 30) ಸಿಎಲ್ ಪಿ ಸಭೆ (ಕಾಂಗ್ರೆಸ್ ಶಾಸಕಾಂಗ ಸಭೆ) ಕರೆದಿದ್ದು, ಹೈಕಮಾಂಡ್ ನಾಯಕರು ವೀಕ್ಷಕರಾಗಿ ಬರಲಿದ್ದಾರೆ. ಹೀಗಾಗಿ ಯಾವುದೇ ಶಾಸಕರು ದೆಹಲಿಗೆ ಬರಬೇಡಿ ಎಂದು ಹೇಳಿದ್ದೇವೆ. ಕೆಲ ವಿಚಾರಗಳನ್ನ ಸಿದ್ದರಾಮಯ್ಯನವರ ನಾವು ಚರ್ಚೆ ಮಾಡಿದ್ದೇವೆ. ಸಿಎಲ್ ಪಿ ಬಳಿಕ ಪ್ರಮಾಣ ವಚನಕ್ಕೆ ದಿನ ನಿಗಧಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More