ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಡಿಕೆಶಿ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕ ಡಾಕ್ಟರ್ ರಂಗನಾಥ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅವರು ಇವರ ಹೇಳಿಕೆಗಳಿಗೆ ಗಮನ ಕೊಡಬಾರದು. ಸಿಎಂ ಡಿಸಿಎಂ ವರಿಷ್ಠರು ಏನು ಹೇಳುತ್ತಾರೆ ಅದರಂತೆ ನಡೆಯಬೇಕು. ಯತೀಂದ್ರ ಸಿದ್ರಾಮಯ್ಯನವರು ವಯಕ್ತಿಕ ಅಭಿಪ್ರಾಯ ಯಾವ ಕಾರಣಕ್ಕೆ ಕೊಟ್ಟಿದ್ದಾರೆ ಎನ್ನುವುದನ್ನು ಅವರನ್ನ ಕೇಳಬೇಕು. ಕಾಂಗ್ರೆಸ್ ಹೈಕಮಾಂಡ್ ಸಮರ್ಥವಾಗಿದೆ. ಅತಿ ಶೀಘ್ರದಲ್ಲೇ ಸೂಕ್ತ ನಿರ್ಧಾರವನ್ನು ಕೊಡುತ್ತಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್ಗೆ ಒಳ್ಳೆದಾಗುತ್ತೆ. ಅವರು ಬಯಸಿದ್ದು, ಸಿಗಲಿದೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.
ಬೆಳಗಾವಿ, (ಡಿಸೆಂಬರ್ 11): ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾಯ್ತು. ನಾನ್ ವೆಜ್ ಊಟವೂ ಮುಗೀತು. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಎಂಬುದನ್ನ ಘಂಟಾಘೋಷವಾಗಿ ಹೇಳಿದ್ದು ಆಯ್ತು. ಆದ್ರೆ, ಕಾಂಗ್ರೆಸ್ ಮನೆಯಲ್ಲಿ ಕುರ್ಚಿ ಕ್ರಾಂತಿಯ ಕಿಚ್ಚು ಮಾತ್ರ ಆರಿಲ್ಲ. ಎಲ್ಲವೂ ಕೂಲ್ ಆಯ್ತು ಎನ್ನುವಾಗಲೇ ಮತ್ತೆ ಸಿಎಂ ಪುತ್ರ ಯತೀಂದ್ರ ಪವರ್ ಶೇರಿಂಗ್ ವಿಚಾರವಾಗಿ ಮಾತನಾಡಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕೂಡ ಸ್ಪಷ್ಟವಾಗಿ ಹೇಳಿದೆ ಅಂತಾ ಯತೀಂದ್ರ ಪುನರುಚ್ಛರಿಸಿದ್ದಾರೆ. ಇದು ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ಡಿಕೆ ಶಿವಕುಮಾರ್ ಬಣದ ಆಕ್ರೋಶಕ್ಕೆ ಕಾರಣವಾಗಿದೆ.
ಯತೀಂದ್ರ ಹೇಳಿಕೆ ಬೆನ್ನಲ್ಲೇ ಸದನದಲ್ಲೇ ಡಿಕೆ ಶಿವಕುಮಾರ್ ತಮ್ಮ ಆಪ್ತ ಶಾಸಕರೊಂದಿಗೆ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಇದೇ ಡಿಕೆಶಿ ಬಣದ ನಾಯಕ ಒಟ್ಟಿಗೆ ಊಟಕ್ಕೆ ಸೇರಿದ್ದು, ಈ ವೇಳೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಹೀಗೆ ಕಾಂಗ್ರೆಸ್ನ್ಲಲಿ ಮತ್ತೆ ಬಣ ಬಡಿದಾಟ ಉಲ್ಭಗೊಂಡಿದ್ದು, ಈ ಬಗ್ಗೆ ಡಿಕೆಶಿ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕ ಡಾಕ್ಟರ್ ರಂಗನಾಥ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅವರು ಇವರ ಹೇಳಿಕೆಗಳಿಗೆ ಗಮನ ಕೊಡಬಾರದು. ಸಿಎಂ ಡಿಸಿಎಂ ವರಿಷ್ಠರು ಏನು ಹೇಳುತ್ತಾರೆ ಅದರಂತೆ ನಡೆಯಬೇಕು. ಯತೀಂದ್ರ ಸಿದ್ರಾಮಯ್ಯನವರು ವಯಕ್ತಿಕ ಅಭಿಪ್ರಾಯ ಯಾವ ಕಾರಣಕ್ಕೆ ಕೊಟ್ಟಿದ್ದಾರೆ ಎನ್ನುವುದನ್ನು ಅವರನ್ನ ಕೇಳಬೇಕು. ಕಾಂಗ್ರೆಸ್ ಹೈಕಮಾಂಡ್ ಸಮರ್ಥವಾಗಿದೆ. ಅತಿ ಶೀಘ್ರದಲ್ಲೇ ಸೂಕ್ತ ನಿರ್ಧಾರವನ್ನು ಕೊಡುತ್ತಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್ಗೆ ಒಳ್ಳೆದಾಗುತ್ತೆ. ಅವರು ಬಯಸಿದ್ದು, ಸಿಗಲಿದೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

