ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ

Updated on: Mar 03, 2026 | 3:18 PM

ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command)​ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್​ ಮೀಟಿಂಗ್ ಕರೆದಿದ್ದಾರೆ.

ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command)​ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್​ ಮೀಟಿಂಗ್ ಕರೆದಿದ್ದಾರೆ. ಹೌದು…ಇದೇ ಮಾರ್ಚ್ 10ರಂದು ಖಾಸಗಿ ಹೋಟೆಲ್​ನಲ್ಲಿ ಔತಣಕೂಟ ಆಯೋಜಿಸಿದ್ದಾರೆ. ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳಿಸುತ್ತಿರುವುದರಿಂದ ಈ ಡಿನ್ನರ್ ಪಾರ್ಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಔತನಕೂಟದ ಮೂಲಜ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ವಿಶ್ಷೇಷಿಸಲಾಗಿದೆ.

ಇದನ್ನೂ ಓದಿ: 60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More