ಕಾಗೋಡು ತಿಮ್ಮಪ್ಪಗೆ ಡಿಕೆ ಶಿವಕುಮಾರ್​ ವಿಡಿಯೋ ಕಾಲ್​​: ಆರೋಗ್ಯ ವಿಚಾರಿಸಿದ ಸಿಎಂ

Edited By:

Updated on: Oct 31, 2026 | 2:25 PM

ಮುಖ್ಯಾಂಶಗಳು

  • ಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
  • ಕಾಗೋಡು ತಿಮ್ಮಪ್ಪರೊಂದಿಗೆ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ ಸಿಎಂ
  • ಆರೋಗ್ಯ ಹೇಗಿದೆ ಎಂದು ವಿಚಾರಿಸಿದ ಡಿಕೆ ಶಿವಕುಮಾರ್​

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಸಿಎಂ ಡಿಕೆ ಶಿವಕುಮಾರ್ ವೀಡಿಯೋ ಕರೆ ಮಾಡಿ ಅಭಿನಂದಿಸಿದರು. ಆರೋಗ್ಯ ವಿಚಾರಿಸಿದ ಸಿಎಂ, "ನಿಮ್ಮ ಆಡಳಿತ ನೋಡುವ ಸೌಭಾಗ್ಯ ನನಗಿಲ್ಲ" ಎಂದ ತಿಮ್ಮಪ್ಪ ಅವರಿಗೆ ಹೆಲಿಕಾಪ್ಟರ್ ಕಳುಹಿಸುವ ಆಫರ್ ನೀಡಿದರು. ತಿಮ್ಮಪ್ಪ ಅವರ ಮಾರ್ಗದರ್ಶನದಂತೆ ಸರ್ಕಾರ ನಡೆಯಲಿದೆ ಎಂದು ಡಿಕೆಶಿ ಭರವಸೆ ನೀಡಿದರು.

ಶಿವಮೊಗ್ಗ, ಅಕ್ಟೋಬರ್​​​ 31: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಸಾಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ್ದಾರೆ. ಇದೇ ವೇಳೆ ಸಿಎಂ ಡಿಕೆ ಶಿವಕುಮಾರ್​​ಗೆ ವಿಡಿಯೋ ಕಾಲ್ ಮಾಡಿದ ಸಚಿವ ಮಧು ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಜೊತೆ ಮಾತನಾಡಿದರು. ‘ಆರೋಗ್ಯ ಹೇಗಿದೆ ಎಂದ ಡಿಕೆ ಶಿವಕುಮಾರ್​ಗೆ ಚೆನ್ನಾಗಿದೆ, ನೀವು ಚೆನ್ನಾಗಿರಬೇಕು ಎಂದು ಅವರು ಹಾರೈಸಿದರು. ನಿಮ್ಮ ಆಶೀರ್ವಾದ ನಮಗೆ ಇರಬೇಕು ಎಂದರು ಸಿಎಂ. ನಿಮ್ಮ ಆಡಳಿತ ನೋಡುವ ಸೌಭಾಗ್ಯ ಇಲ್ಲ ನನಗೆ. ಹೆಲಿಕಾಪ್ಟರ್ ಕಳಿಸುತ್ತೇನೆ ಬರುವುದಕ್ಕೆ ಆಗತ್ತಾ ಎಂದು ಸಿಎಂ ಕೇಳಿದರು’. ಈ ವೇಳೆ ಕಾಗೋಡು ತಿಮ್ಮಪ್ಪ ‘ಬೇಡ ನಾನೇ ಯಾವುದರಲ್ಲಾದರೂ ಬರುತ್ತೇನೆ’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 31, 2026 02:25 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More