ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದರು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಬಳಿಕ, ಹೆಗ್ಗಡೆ ಅವರೊಂದಿಗೆ ಗೌಪ್ಯವಾಗಿ ಮಾತುಕತೆ ನಡೆಸಿದರು. ಈ ಭೇಟಿಯು ರಾಜಕೀಯ ಮಹತ್ವವನ್ನು ಹೊಂದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು, ಏಪ್ರಿಲ್ 20: ಬೆಳ್ತಂಗಡಿ ತಾಲೂಕಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivkumar) ಅವರು ರವಿವಾರ (ಏ.20) ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಭೇಟಿ ನೀಡಿದರು. ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದರು. ಮಂಜುನಾಥಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ (Veerendra Heggade) ಅವರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದರು.
Latest Videos

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ

ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?

ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
