ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಮುಖ್ಯಾಂಶಗಳು
- ಶೀಗೆ ಹುಣ್ಣಿಮೆ ದಿನ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್
- ಯಲ್ಲಮ್ಮ ದೇವಸ್ಥಾನದಲ್ಲಿ 215 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ
- ದೇವಸ್ಥಾನವನ್ನು ಪ್ರಾಧಿಕಾರ ಎಂದು ಘೋಷಣೆ ಮಾಡಲಾಗಿದೆ
ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು 215 ಕೋಟಿಗೂ ಹೆಚ್ಚು ಅನುದಾನದಲ್ಲಿ ದೇಗುಲದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಈ ಯೋಜನೆಗಳು ಭಕ್ತಾದಿಗಳಿಗೆ ಅನುಕೂಲವಾಗಲಿದ್ದು, ದೇವಸ್ಥಾನದ ಪ್ರಾಧಿಕಾರದ ರಚನೆ ಮತ್ತು ಪ್ರಗತಿಗೆ ಒತ್ತು ನೀಡಲಾಗಿದೆ ಎಂದರು.
ಬೆಳಗಾವಿ, ಅಕ್ಟೋಬರ್ 26: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಕಷ್ಟ ಆಲಿಸುವುದಕ್ಕೆ ಖುದ್ದು ಸಿಎಂ ಡಿಕೆ ಶಿವಕುಮಾರ್ ಜಿಲ್ಲೆಗೆ ಆಗಮಿಸಿದ್ದಾರೆ. ರೈತರೊಂದಿಗಿನ ಸಭೆಗೂ ಮುನ್ನ ಶೀಗೆ ಹುಣ್ಣಿಮೆ ಹಿನ್ನೆಲೆ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಿ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಶೀಗೆ ಹುಣ್ಣಿಮೆ ದಿನ ಯಲ್ಲಮ್ಮ ದೇವಿ ದರ್ಶನ ಪಡೆದಿದ್ದೇನೆ. 215 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿದ್ದೇವೆ. ಸರ್ಕಾರದಿಂದ ಇದುವರೆಗೆ ಇಷ್ಟು ದೊಡ್ಡಮಟ್ಟದ ಕೆಲಸ ಆಗಿಲ್ಲ. ಸವದತ್ತಿ ಯಲ್ಲಮ್ಮನ ದೇವಸ್ಥಾನ ಬಹಳ ಅಭಿವೃದ್ಧಿಯಾಗಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದೇವಸ್ಥಾನವನ್ನು ಪ್ರಾಧಿಕಾರ ಎಂದು ಘೋಷಣೆ ಮಾಡಲಾಗಿದೆ. ಪ್ರವಾಸೋದ್ಯಮ ಸಚಿವರು, ಶಾಸಕರ ನೇತೃತ್ವದಲ್ಲಿ ಸಮಿತಿ ಆಗಿದೆ. ಧಾರ್ಮಿಕ ದತ್ತಿ ಸಚಿವರು, H.K.ಪಾಟೀಲ್ ಅಭಿವೃದ್ಧಿ ಕೆಲಸ ಮಾಡಿದ್ದಾರೆ’ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್: ಬೈಕ್ಗಳು ಜಖಂ

