ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ​

Edited By:

Updated on: Oct 26, 2026 | 8:59 PM

ಮುಖ್ಯಾಂಶಗಳು

  • ಶೀಗೆ ಹುಣ್ಣಿಮೆ ದಿನ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್​​
  • ಯಲ್ಲಮ್ಮ‌ ದೇವಸ್ಥಾನದಲ್ಲಿ 215 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ದೇವಸ್ಥಾನವನ್ನು ಪ್ರಾಧಿಕಾರ ಎಂದು ಘೋಷಣೆ ಮಾಡಲಾಗಿದೆ

ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು 215 ಕೋಟಿಗೂ ಹೆಚ್ಚು ಅನುದಾನದಲ್ಲಿ ದೇಗುಲದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಈ ಯೋಜನೆಗಳು ಭಕ್ತಾದಿಗಳಿಗೆ ಅನುಕೂಲವಾಗಲಿದ್ದು, ದೇವಸ್ಥಾನದ ಪ್ರಾಧಿಕಾರದ ರಚನೆ ಮತ್ತು ಪ್ರಗತಿಗೆ ಒತ್ತು ನೀಡಲಾಗಿದೆ ಎಂದರು.

ಬೆಳಗಾವಿ, ಅಕ್ಟೋಬರ್​​ 26: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಕಷ್ಟ ಆಲಿಸುವುದಕ್ಕೆ ಖುದ್ದು ಸಿಎಂ ಡಿಕೆ ಶಿವಕುಮಾರ್​ ಜಿಲ್ಲೆಗೆ ಆಗಮಿಸಿದ್ದಾರೆ. ರೈತರೊಂದಿಗಿನ ಸಭೆಗೂ ಮುನ್ನ ಶೀಗೆ ಹುಣ್ಣಿಮೆ ಹಿನ್ನೆಲೆ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಿ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಶೀಗೆ ಹುಣ್ಣಿಮೆ ದಿನ ಯಲ್ಲಮ್ಮ ದೇವಿ ದರ್ಶನ ಪಡೆದಿದ್ದೇನೆ. 215 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿದ್ದೇವೆ. ಸರ್ಕಾರದಿಂದ ಇದುವರೆಗೆ ಇಷ್ಟು ದೊಡ್ಡಮಟ್ಟದ ಕೆಲಸ ಆಗಿಲ್ಲ. ಸವದತ್ತಿ ಯಲ್ಲಮ್ಮನ ದೇವಸ್ಥಾನ ಬಹಳ ಅಭಿವೃದ್ಧಿಯಾಗಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದೇವಸ್ಥಾನವನ್ನು ಪ್ರಾಧಿಕಾರ ಎಂದು ಘೋಷಣೆ ಮಾಡಲಾಗಿದೆ. ಪ್ರವಾಸೋದ್ಯಮ ಸಚಿವರು, ಶಾಸಕರ ನೇತೃತ್ವದಲ್ಲಿ ಸಮಿತಿ ಆಗಿದೆ. ಧಾರ್ಮಿಕ ದತ್ತಿ ಸಚಿವರು, H.K.ಪಾಟೀಲ್ ಅಭಿವೃದ್ಧಿ ಕೆಲಸ ಮಾಡಿದ್ದಾರೆ’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More