ಪ್ರಮಾಣವಚನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಕೊಟ್ಟ ಸಲಹೆ ಸೂಚನೆಗಳೇನು ಗೊತ್ತಾ?

ಪ್ರಮಾಣವಚನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಕೊಟ್ಟ ಸಲಹೆ ಸೂಚನೆಗಳೇನು ಗೊತ್ತಾ?

ರಮೇಶ್ ಬಿ. ಜವಳಗೇರಾ
|

Updated on:May 19, 2023 | 12:39 PM

ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಶೀಲಿಸಿದರು. ಅಲ್ಲದೇ ಸರ್ಕಾರ ಹಿರಿಯ ಅಧಿಕಾರಿಗಳು ಹಾಗು ಪೊಲೀಸರಿಗೆ ಕಾರ್ಯಕ್ರಮದ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.

ಬೆಂಗಳೂರು: ನಾಳೆ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹ ಸಮಾರಂಭ ನಡೆಯಲಿದೆ. ಹೀಗಾಗಿ ಸಹಸ್ರಾರು ಜನರು ಆಗಮಿಸುವ ನಿರೀಕ್ಷೆಗಳಿದ್ದು, ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇನ್ನು ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಶೀಲಿಸಿದರು. ಅಲ್ಲದೇ ಸರ್ಕಾರ ಹಿರಿಯ ಅಧಿಕಾರಿಗಳು ಹಾಗು ಪೊಲೀಸರಿಗೆ ಕಾರ್ಯಕ್ರಮದ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.

Published on: May 19, 2023 12:36 PM