Karnataka Assembly Polls; ಭ್ರಷ್ಟಾಚಾರ ನಡೆಸಿದ ಕಾರಣ ಡಿಕೆ ಶಿವಕುಮಾರ್ ಜೈಲಿಗೆ ಹೋಗಿದ್ದರು: ಬಸನಗೌಡ ಪಾಟೀಲ್ ಯತ್ನಾಳ್
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾ ಖಾವೂಂಗಾ ನಾ ಖಾನೆ ದೂಂಗಾ ಅಂತ ಹೇಳಿದ್ದನ್ನು ಕಟ್ಟುನಿಟ್ಟಾಗಿ ಜಾರಿಯಲ್ಲಿಟ್ಟಿದ್ದಾರೆ ಎಂದು ಯತ್ನಾಳ್ ಹೇಳಿದರು.
ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಡಿಕೆ ಶಿವಕುಮಾರ್ (DK Shivakumar) ಭ್ರಷ್ಟಾಚಾರ ನಡೆಸಿದ ಕಾರಣಕ್ಕೆ ತಿಹಾರ್ ಜೈಲು ಸೇರಿದ್ದರೇ ಹೊರತು ಅವರೇನು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ (freedom fighter) ಎಂದು ಹೇಳಿದರು. ಐಟಿ ಮತ್ತು ಈಡಿ ಇಲಾಖೆಗಳು ಕೇವಲ ಭ್ರಷ್ಟರನ್ನು ಮಾತ್ರ ಬೆನ್ನಟ್ಟುತ್ತವೆ ಎಂದು ಅವರು ಮಾರ್ಮಿಕವಾಗಿ ಹೇಳಿದರು. ಮಾಡಾಳ್ ವಿರೂಪಾಕ್ಷಪ್ಪನವರ ಬಗ್ಗೆ ಕೇಳಿದಾಗ, ಬಿಜೆಪಿ ಸರ್ಕಾರ ಲೋಕಾಯುಕ್ತಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದರಿಂದಲೇ ಮಾಡಾಳ್ ಮನೆಗಳ ಮೇಲೆ ದಾಳಿ ನಡೆದು ಭ್ರಷ್ಟಾಚಾರ ಬಯಲಿಗೆ ಬಂತು ಎಂದರ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾ ಖಾವೂಂಗಾ ನಾ ಖಾನೆ ದೂಂಗಾ ಅಂತ ಹೇಳಿದ್ದ್ದಲ್ಲದೆ ಅದನ್ನು ಕಟ್ಟುನಿಟ್ಟಾಗಿ ಜಾರಿಯಲ್ಲಿಟ್ಟಿದ್ದಾರೆ ಎಂದು ಯತ್ನಾಳ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ