ಫುಟ್‌ಬಾಲ್ ಫೈನಲ್ ವೀಕ್ಷಿಸಿ ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ

Updated on: Jul 20, 2026 | 11:12 AM

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯುವಕರೊಂದಿಗೆ ಫಿಫಾ ವಿಶ್ವಕಪ್ ವೀಕ್ಷಿಸಿ, ರಾಜ್ಯದಲ್ಲಿ ಕ್ರೀಡೆ ಮತ್ತು ಸಂಸ್ಕೃತಿಯ ಉತ್ತೇಜನಕ್ಕೆ ಸರ್ಕಾರದ ಬೃಹತ್ ಯೋಜನೆಯನ್ನು ಘೋಷಿಸಿದರು. ಗ್ರಾಮೀಣ ಯುವಕರ ಪ್ರತಿಭೆ ಗುರುತಿಸಲು 'ಜೋಡೋ ಯುವಕರ ಸಂಘ' ಸ್ಥಾಪನೆ ಮಾಡಲಾಗುವುದು. 10,000 ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾವಿರಾರು ಕೋಟಿ ಅನುದಾನ ಮೀಸಲಿಡಲಾಗಿದೆ. ಯುವಜನತೆಗೆ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ.

ಬೆಂಗಳೂರು, ಜು.20: 2026ರ ಫಿಫಾ ವಿಶ್ವಕಪ್‌ನ ಜಾಗತಿಕ ಫುಟ್‌ಬಾಲ್ ಫೈನಲ್ ಪಂದ್ಯವನ್ನು ಯುವಕರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೀಕ್ಷಿಸಿದ್ದರು. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದರೆ. ರಾಜ್ಯದ ಯುವ ಜನಾಂಗವನ್ನು ಕ್ರೀಡೆ ಮತ್ತು ಸಂಸ್ಕೃತಿಯಲ್ಲಿ ಮುಂಚೂಣಿಗೆ ತರಲು ಸರ್ಕಾರ ಬೃಹತ್ ಯೋಜನೆಯೊಂದನ್ನು ಹಮ್ಮಿಕೊಂಡಿದೆ ಎಂದು ಹೇಳಿದ್ದಾರೆ. “ನಮ್ಮ ಪಕ್ಷದ ಶಾಸಕರು, ಕರ್ನಾಟಕ ರಾಜ್ಯ ಫುಟ್‌ಬಾಲ್ ಅಸೋಸಿಯೇಷನ್ (KSFA) ಹಾಗೂ ಬಿಡಿಎ (BDA) ಅಧ್ಯಕ್ಷರೂ ಆಗಿರುವ ಎನ್.ಎ. ಹ್ಯಾರಿಸ್ ಅವರು ಯುವಕರಿಗಾಗಿ ಈ ಫುಟ್‌ಬಾಲ್ ಫೈನಲ್ ಪಂದ್ಯ ವೀಕ್ಷಣೆಯ ವಿಶೇಷ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ಕ್ರೀಡಾಂಗಣಕ್ಕೆ ಸಾವಿರಾರು ಸಂಖ್ಯೆಯಲ್ಲಿ ಫುಟ್‌ಬಾಲ್ ಪ್ರಿಯರು ಹಾಗೂ ಯುವಕರು ಆಗಮಿಸಿ ಪಂದ್ಯವನ್ನು ನೋಡಿದ್ದಾರೆ. ಇದೇ ವೇಳೆ ಯುವಕರ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, “ನಮ್ಮ ಯುವಕರೆಲ್ಲರೂ ತುಂಬಾ ಒಳ್ಳೆಯವರಾಗಿದ್ದಾರೆ. ಕ್ರೀಡಾ ಸ್ಫೂರ್ತಿಯನ್ನು ಮೆರೆಯುವ ಅವರು ಯಾರೂ ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ ಎನ್ನುವ ಸಂಪೂರ್ಣ ನಂಬಿಕೆ ನನಗಿದೆ. ಇಂದು ಇಡೀ ಪ್ರಪಂಚದಾದ್ಯಂತ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಒಂದಾಗಿ ಫುಟ್‌ಬಾಲ್ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ಕುರಿತು ಮಾತನಾಡಿದ ಡಿಸಿಎಂ, “ನಮ್ಮ ಸರ್ಕಾರವು ಕ್ರೀಡಾ ಕ್ಷೇತ್ರಕ್ಕೆ ಮತ್ತು ಕ್ರೀಡಾಪಟುಗಳಿಗೆ ಸದಾ ಬೆಂಬಲ ಹಾಗೂ ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಜೋಡೋ ಯುವಕರ ಸಂಘ’ವನ್ನು ಸ್ಥಾಪನೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ಈ ಯೋಜನೆಯ ಮೂಲಕ ರಾಜ್ಯಾದ್ಯಂತ ಸುಮಾರು 10,000 ಯುವಕರನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಿದ್ಧಪಡಿಸಲಾಗುತ್ತಿದೆ. ಯುವಕರ ಈ ಕ್ರೀಡಾ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಟ್ಟಿದೆ ಎಂದು ಹೇಳಿದ್ದರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us