Bengaluru RCB Celebration: ಕೊಹ್ಲಿ ಆ್ಯಂಡ್ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್: ವಿಡಿಯೋ ನೋಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯವನ್ನು ಗೆದ್ದು ಚಾಂಪಿಯನ್ ಆಗಿದೆ. ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಧ್ವಜದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಆರ್ಸಿಬಿ ಆಟಗಾರರನ್ನು ಕಾಣಲು ಅಭಿಮಾನಿಗಳು ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸೇರಿದ್ದರು. ವಿಜಯೋತ್ಸವದ ವಾತಾವರಣ ನಗರದಲ್ಲಿ ತುಂಬಿದೆ.
18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ವಿಮಾನದ ಮೂಲಕ ಬೆಂಗಳೂರಿಗೆ ಬಂದ ಆರ್ಸಿಬಿ ಆಟಗಾರರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಧ್ವಜ ನೀಡಿ ಸ್ವಾಗತಿಸಿದರು. ಆರ್ಸಿಬಿ ಆಟಗಾರರನ್ನು ನೋಡಲು ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.
Latest Videos