ಮುಂದಿನ ಸಿಎಂ ಡಿಕೆ ಶಿವಕುಮಾರ್: ಹುಲಿಗೆಮ್ಮ ದೇವಿಯ ಜೋಗತಿ ಭವಿಷ್ಯ
ಕರ್ನಾಟಕ ಕಾಂಗ್ರೆಸ್ನಲ್ಲಿ ಒಂದೆಡೆ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಬಿರುಸಿನ ರಾಜಕೀಯ ಚಟುವಟಿಕೆಗಳೂ ನಡೆಯುತ್ತಿವೆ. ಈ ಮಧ್ಯೆ, ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ. ಖುಷಿ ಖುಷಿಯಿಂದ ಸಿದ್ದರಾಮಯ್ಯ ಡಿಕೆಶಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ ಎಂದು ಹುಲಿಗೆಮ್ಮ ದೇವಿಯ ಜೋಗತಿ ಭೈಲಮ್ಮ ಬಾಳಮಣ್ಣ ಭವಿಷ್ಯ ಹೇಳಿದ್ದಾರೆ.
ಗದಗ, ನವೆಂಬರ್ 24: ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗದಗದ ರಾಚೋಟೇಶ್ವರ ನಗರದ ನಿವಾಸಿ, ಹುಲಿಗೆಮ್ಮ ದೇವಿಯ ಜೋಗತಿ ಭೈಲಮ್ಮ ಬಾಳಮಣ್ಣ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯ ಈಗ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಗದ್ದುಗೆ ಹಾಕಿ ದೇವಿ ಕೊಡ ಎತ್ತುವ ಮೂಲಕ ಜೋಗತಿ ಅಮ್ಮ ಭವಿಷ್ಯ ನುಡಿದಿದ್ದಾರೆ. ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯ ಸುಳ್ಳು ಆಗುವುದಿಲ್ಲ ಎಂದು ಜೋಗತಿ ಹೇಳಿದ್ದಾರೆ. ಹುಲಿಗೆಮ್ಮ ದೇವಿ ಹೇಳಿದ್ದಾಳೆ, ಡಿಕೆ ಶಿವಕುಮಾರ್ ಅವರೇ ನೀವು ಚಿಂತೆ ಮಾಡಬೇಡಿ ಸಿಎಂ ಆಗುತ್ತೀರಿ. ಎರಡೂವರೆ ತಿಂಗಳ ಒಳಗಾಗಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಆದರೆ, ಹುಲಿಗೆಮ್ಮ ದೇವಿ ನೆನೆಪಿಸಿಕೊಂಡು ಮುಂದಿನ ಹೆಜ್ಜೆ ಇಡಬೇಕು. ಖುಷಿ ಖುಷಿಯಿಂದ ಡಿಕೆಶಿಗೆ ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡುತ್ತಾರೆ ಎಂದು ಜೋಗತಿ ಭವಿಷ್ಯ ಹೇಳಿದ್ದಾರೆ.
Latest Videos
