ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಸಂಚಲನ ಮೂಡಿಸಿದ ಕೈ ಶಾಸಕ

Updated on: Jun 22, 2025 | 3:12 PM

ಕರ್ನಾಟಕದಲ್ಲಿ ಮತ್ತೆ ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಮುನ್ನಲೆಗೆ ಬಂದಿದೆ. ಇನ್ನುಳಿದ ಎರಡುವರೆ ವರ್ಷ ಕಾಲ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರನ್ನೆ ಮುಂದುವರಿಸಬೇಕೆಂದು ಇವರ ಬೆಂಬಲಿಗರು ಒತ್ತಾಸೆಯಾಗಿದೆ. ಹೀಗಾಗಿ ಕಾಂಗ್ರೆಸ್​ ನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

ರಾಮನಗರ, (ಜೂನ್ 22): ಕರ್ನಾಟಕದಲ್ಲಿ ಮತ್ತೆ ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಮುನ್ನಲೆಗೆ ಬಂದಿದೆ. ಇನ್ನುಳಿದ ಎರಡುವರೆ ವರ್ಷ ಕಾಲ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರನ್ನೆ ಮುಂದುವರಿಸಬೇಕೆಂದು ಇವರ ಬೆಂಬಲಿಗರು ಒತ್ತಾಸೆಯಾಗಿದೆ. ಹೀಗಾಗಿ ಕಾಂಗ್ರೆಸ್​ ನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ
ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

ರಾಮನಗರದಲ್ಲಿಂದು ಮಾತನಾಡಿರುವ ಇಕ್ಬಾಲ್ ಹುಸೇನ್ ,ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ರು. ಹಾಗೇ ಗ್ಯಾರಂಟಿ ಯೋಜನೆಗಳು ಕೊಡಲು ಸಾಧ್ಯವಿಲ್ಲ ಅಂತಾ ಹೇಳಿದ್ದರು. ಆದ್ರೆ, ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಮುಂದಿನ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ 140 ಸೀಟ್​​ ಗಳು ಗೆದ್ದು ಸರ್ಕಾರ ರಚಿಸುತ್ತೇವೆ. ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More