ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ
ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಮುಂದಿನ ಮೂರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾಗಿ ಭವಿಷ್ಯ ನುಡಿದಿದ್ದಾರೆ. ರಾಜಕಾರಣದಲ್ಲಿ ಬದಲಾವಣೆ ಸಹಜ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ ಎಂದೂ, ಹೈಕಮಾಂಡ್‌ನ ನಿರ್ಧಾರವೇ ಅಂತಿಮ ಎಂದೂ ಅವರು ಹೇಳಿದ್ದಾರೆ. ವಿಡಿಯೋ ನೋಡಿ.
ರಾಮನಗರ, ಜೂನ್ 29: ರಾಜಕಾರಣದಲ್ಲಿ ಬದಲಾವಣೆ ಸಹಜ. ಮುಂದಿನ 3 ತಿಂಗಳಲ್ಲಿ ಡಿ.ಕೆ.ಶಿವಕುಮಾರ್ (DK Shivakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ, ಹೈಕಮಾಂಡ್ ಒಂದೇ. ಪಕ್ಷದಲ್ಲಿ ಯಾರಿಗೆ ಸೂಕ್ತ ಅನಿಸುತ್ತೋ ಅವರಿಗೆ ಅಧಿಕಾರ ಸಿಗಲಿದೆ. ಈ ಸರ್ಕಾರ ಬರೋದಕ್ಕೆ ಮುನ್ನ ಕಾಂಗ್ರೆಸ್ ಶಾಸಕರ ಸಂಖ್ಯೆ ಎಷ್ಟಿತ್ತು. 136 ಸೀಟ್ ಬರಲು ಬರಲು ಹೋರಾಟ, ಶ್ರಮ, ಆಸಕ್ತಿ ಯಾರದ್ದು? ಇದರ ಹಿಂದಿನ ಹೋರಾಟ, ಶ್ರಮ ಯಾರದ್ದೆಂದು ಎಲ್ಲರಿಗೂ ಗೊತ್ತಿದೆ ಎಂದು ಡಿ.ಕೆ.ಶಿವಕುಮಾರ್ ಪರ ಶಾಸಕ ಇಕ್ಬಾಲ್ ಹುಸೇನ್ ಬ್ಯಾಟ್ ಬೀಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 29, 2025 09:52 AM