ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಸ್ಫೋಟಕ ಹೇಳಿಕೆ ನೀಡಿದ ಶಾಸಕ ಇಕ್ಬಾಲ್ ಹುಸೇನ್

Edited By:

Updated on: Dec 13, 2025 | 3:43 PM

ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದ ಕಾಂಗ್ರೆಸ್​ ಶಾಸಕ ಇಕ್ಬಾಲ್ ಹುಸೇನ್, ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಶೇ.99ರಷ್ಟು ಡಿ.ಕೆ.ಶಿವಕುಮಾರ್​ಗೆ ಅವಕಾಶ ಇದೆ. ಡಿ.ಕೆ.ಶಿವಕುಮಾರ್​ರನ್ನು ಸಿಎಂ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ನಮ್ಮ ಆಸ್ತಿ, ಇಬ್ಬರೂ ನಮ್ಮ ನಾಯಕರು ಎಂದಿದ್ದಾರೆ.

ರಾಮನಗರ, ಡಿಸೆಂಬರ್​ 13: ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​ರನ್ನು ಸಿಎಂ ಮಾಡುವುದೇ ನಮ್ಮ ಗುರಿ. ಶೇ.99ರಷ್ಟು ಅವಕಾಶ ಇದೆ. ಡಿ.ಕೆ.ಶಿವಕುಮಾರ್ ಒಮ್ಮೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More