ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದರು. ದೆಹಲಿಯ 10 ಜನಪಥ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದರು. ಸಿಎಂ ಶಿವಕುಮಾರ್‌ಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದರು.
ದೆಹಲಿ, ಜೂ.10: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಉಪಸ್ಥಿತರಿದ್ದರು. ಸಿಎಂ ಆದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಶಿವಕುಮಾರ್ ಅವರಿಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
