ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 25, 2024 | 10:41 PM

ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಈ ವರ್ಷ ಉತ್ತಮ ಮಳೆ ಮತ್ತು ಬೆಳೆಯಿಂದ ರಾಜ್ಯಕ್ಕೆ ನೆಮ್ಮದಿ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಿಗೆ ಆರೋಗ್ಯ ಮತ್ತು ಐಶ್ವರ್ಯ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಹಾಸನ, ಅಕ್ಟೋಬರ್​ 25: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಇಂದು ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ತಾಯಿ ಹಾಸನಾಂಬೆ ದರ್ಶನಕ್ಕೆ ಬಂದಿದ್ದೇನೆ. ಈ ವರ್ಷ ತಾಯಿ ಕೃಪೆಯಿಂದ ಮಳೆ-ಬೆಳೆ ಉತ್ತಮವಾಗಿದೆ. ರಾಜ್ಯದ ಜನರಿಗೆ ನೆಮ್ಮದಿಯನ್ನ ತಾಯಿ ಕೊಟ್ಟಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆರೋಗ್ಯ, ಐಶ್ವರ್ಯ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಜಿಲ್ಲಾಡಳಿತ ಹಾಸನಾಂಬೆ ದರ್ಶನ ಚೆನ್ನಾಗಿ ಮಾಡಿದೆ. 3 ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಈಗ ಮಾತನಾಡಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.