ಹೇಗಿದೆ ನೋಡಿ ಡಿ.ಕೆ. ಶಿವಕುಮಾರ್​​ ಅವರ ಕನಕಪುರದ ಭವ್ಯ ಬಂಗಲೆ!

Edited By:

Updated on: May 31, 2026 | 2:26 PM

ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಕನಕಪುರದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಅವರ ಭವ್ಯ ನಿವಾಸವು ಕ್ಷೇತ್ರದ ಚಟುವಟಿಕೆಗಳ ಕೇಂದ್ರವಾಗಿದೆ. ಕನಕಪುರಕ್ಕೆ ಭೇಟಿ ನೀಡಿದಾಗಲೆಲ್ಲಾ ಡಿಕೆಶಿ ಈ ಮನೆಯಲ್ಲಿ ತಂಗಿ, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಾರೆ. ಈ ನಿವಾಸವು ಕ್ಷೇತ್ರದ ಜನರಿಗೆ ಅವರೊಂದಿಗೆ ಸಂಪರ್ಕ ಸಾಧಿಸಲು ಪ್ರಮುಖ ತಾಣವಾಗಿದೆ.

ಬೆಂಗಳೂರು ದಕ್ಷಿಣ, ಮೇ 31: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜೂನ್ ಮೂರರಂದು ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ವಕ್ಷೇತ್ರವಾದ ಕನಕಪುರದಲ್ಲಿ ವ್ಯಾಪಕ ಸಂತಸ ಮನೆ ಮಾಡಿದೆ. ಕನಕಪುರದಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸವು ಕ್ಷೇತ್ರದ ರಾಜಕೀಯ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿದೆ. ಕನಕಪುರ ತಾಲೂಕಿನ ದೊಡ್ಡಹಾಲಹಳ್ಳಿ ಅವರ ಹುಟ್ಟೂರಾಗಿದ್ದರೂ, ಶಾಸಕರಾದ ನಂತರ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿ ಕನಕಪುರದಲ್ಲಿ ಒಂದು ಭವ್ಯವಾದ ಬಂಗಲೆಯನ್ನು ನಿರ್ಮಿಸಿದ್ದಾರೆ. ಕನಕಪುರಕ್ಕೆ ಭೇಟಿ ನೀಡಿದಾಗ, ಕುಟುಂಬ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ಅವರು ಇದೇ ಮನೆಯಲ್ಲಿ ತಂಗುತ್ತಾರೆ. ಕ್ಷೇತ್ರದ ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಇದು ಪ್ರಮುಖ ತಾಣವಾಗಿದೆ. ಡಿಕೆಶಿ ಅವರ ಭವ್ಯ ಬಂಗಲೆ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 31, 2026 02:26 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More