ಮತದಾನದ ಬಳಿಕ ಪತಿ ಸಿಎಂ ಆಗ್ತಾರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಪತ್ನಿ ಉಷಾ ರಿಯಾಕ್ಷನ್ ಹೀಗಿತ್ತು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೊಡ್ಡ ಆಲಹಳ್ಳಿಯ ಮತಗಟ್ಟೆ ಸಂಖ್ಯೆ 245ರಲ್ಲಿ ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಆಭರಣ, ಸಹೋದರ ಡಿ.ಕೆ ಸುರೇಶ್ ಜತೆ ಆಗಮಿಸಿ ಮತದಾನ ಮಾಡಿದ್ದಾರೆ.
ರಾಮನಗರ: ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತಚಲಾಯಿಸುತ್ತಿದ್ದಾರೆ. ಅದರಂತೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೊಡ್ಡ ಆಲಹಳ್ಳಿಯ ಮತಗಟ್ಟೆ ಸಂಖ್ಯೆ 245ರಲ್ಲಿ ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಆಭರಣ, ಸಹೋದರ ಡಿ.ಕೆ ಸುರೇಶ್ ಜತೆ ಆಗಮಿಸಿ ಮತದಾನ ಮಾಡಿದ್ದಾರೆ. ಇನ್ನು ಮತದಾನ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ನಿಮ್ಮ ಪತಿ ಸಿಎಂ ಆಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ಇದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ. ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ಕರ್ನಾಟಕ ಚುನಾವಣೆ 2023 ಲೈವ್ ಅಪ್ಡೇಟ್ಸ್
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ