ರಾಜ್ಯ ರಾಜಕಾರಣದಲ್ಲಿ ಡಿಕೆ ಸುರೇಶ್ ಅನಿವಾರ್ಯ ಅಗಿದ್ದಾರೆ: ತನ್ವೀರ್ ಸೇಠ್, ಶಾಸಕ
ಚನ್ನಪಟ್ಟಣಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದು ಎನ್ಡಿಎ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಬಿಟ್ಟಿದೆ. ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎನ್ನುತ್ತಿದ್ದರೆ, ಬಿಜೆಪಿ ಸಿಪಿ ಯೋಗೇಶ್ವರ್ಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ. ಏತನ್ಮಧ್ಯೆ ಕಾಂಗ್ರೆಸ್ ನಾಯಕರು ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ.
ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರಾಜ್ಯ ರಾಜಕಾರಣದಲ್ಲಿ ಡಿಕೆ ಸುರೇಶ್ ಮುಂದುವರಿಯುವ ಅವಶ್ಯಕತೆಯಿದೆ ಎಂದರು. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿದ ಸೇಠ್, ಎಲ್ಲ ಕ್ಷೇತ್ರಗಳಿಂದ ಅರ್ಜಿ ಕರೆಯಲಾಗಿದೆ, ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆಗಿಳಿಯಬಹುದಾದ ಅಭ್ಯರ್ಥಿಗಳಲ್ಲಿ ಸುರೇಶ್ ಒಬ್ಬರಾಗಿದ್ದಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪ್ರದೀಪ್ ಈಶ್ವರ್ ಪ್ರಕಾರ ಡಿಕೆ ಸುರೇಶ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ