ರಾಜ್ಯ ರಾಜಕಾರಣದಲ್ಲಿ ಡಿಕೆ ಸುರೇಶ್ ಅನಿವಾರ್ಯ ಅಗಿದ್ದಾರೆ: ತನ್ವೀರ್ ಸೇಠ್, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 1:19 PM

ಚನ್ನಪಟ್ಟಣಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದು ಎನ್​ಡಿಎ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಬಿಟ್ಟಿದೆ. ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎನ್ನುತ್ತಿದ್ದರೆ, ಬಿಜೆಪಿ ಸಿಪಿ ಯೋಗೇಶ್ವರ್​ಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ. ಏತನ್ಮಧ್ಯೆ ಕಾಂಗ್ರೆಸ್ ನಾಯಕರು ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ.

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರಾಜ್ಯ ರಾಜಕಾರಣದಲ್ಲಿ ಡಿಕೆ ಸುರೇಶ್ ಮುಂದುವರಿಯುವ ಅವಶ್ಯಕತೆಯಿದೆ ಎಂದರು. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿದ ಸೇಠ್, ಎಲ್ಲ ಕ್ಷೇತ್ರಗಳಿಂದ ಅರ್ಜಿ ಕರೆಯಲಾಗಿದೆ, ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆಗಿಳಿಯಬಹುದಾದ ಅಭ್ಯರ್ಥಿಗಳಲ್ಲಿ ಸುರೇಶ್ ಒಬ್ಬರಾಗಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರದೀಪ್ ಈಶ್ವರ್ ಪ್ರಕಾರ ಡಿಕೆ ಸುರೇಶ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.