ಬಮೂಲ್ ಅಧ್ಯಕ್ಷನಾಗಲು ಚುನಾವಣೆ ಎದುರಿಸಬೇಕು ಮತ್ತು ಪಕ್ಷದ ನಾಯಕರ ಸಮ್ಮತಿ ಬೇಕು: ಡಿಕೆ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ

Updated on: May 21, 2025 | 1:12 PM

ನಿನ್ನೆ ಹೊಸಪೇಟೆಯಲ್ಲಿ ಕರ್ನಾಟಕ ಸರ್ಕಾರ ನಡೆಸಿದ ಸಾಧನಾ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಕಟುವಾದ ಟ್ವೀಟ್​ಗೆ ಪ್ರತಿಕ್ರಿಯಿಸಿದ ಸುರೇಶ್, ಅವರು ಹೇಳಿರುವುದಕ್ಕೆ ಏನು ಪ್ರತಿಕ್ರಿಯೆ ನೀಡೋದು, ಅವರೊಬ್ಬ ಕಳ್ಸಾಮಿ, ಅವರಂಥ ಹಿಟ್ ಅಂಡ್ ರನ್ ಗಿರಾಕಿಯನ್ನು ಎಲ್ಲೂ ನೋಡಿಲ್ಲ ಎಂದು ಸುರೇಶ್ ಹೇಳಿದರು.

ಬೆಂಗಳೂರು, ಮೇ 21: ಕಾಂಗ್ರೆಸ್ ಧುರೀಣ ಡಿಕೆ ಸುರೇಶ್ ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟದ್ದರೆ ಅದನ್ನು ಗಿಟ್ಟಿಸುವ ದಿಶೆಯಲ್ಲಿ ಒಂದು ಹಂತ ದಾಟಿದ್ದಾರೆ. ಕನಕಪುರ ಹಾಲು ಉತ್ಪಾದಕರ ನಿರ್ದೇಶಕನ (director) ಸ್ಥಾನಕ್ಕೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಾಧ್ಯಮಗಳೊಂದಿಗೆ ಮಾತಾಡಿದ ಸುರೇಶ್, ಹಾಲು ಒಕ್ಕೂಟದ ಅಧ್ಯಕ್ಷನ ಸ್ಥಾನಕ್ಕೆ ತನ್ನನ್ನು ಪರಿಗಣಿಸುವ ಬಗ್ಗೆ ಮಾಹಿತಿ ಇಲ್ಲ, ಅದಕ್ಕೆ ಚುನಾವಣೆ ನಡೆಯಬೇಕು, 14 ನಿರ್ದೇಶಕರ ಪೈಕಿ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಅಧ್ಯಕ್ಷನ ಚುನಾವಣೆ 25 ರಂದು ನಡೆಯಲಿದೆ, ಬಮೂಲ್ ಅಧ್ಯಕ್ಷನಾಗಬೇಕಾದರೆ ಆಯ್ಕೆಯಾಗುವ ನಿರ್ದೇಶಕರು ಮತ್ತು ಪಕ್ಷದ ನಾಯಕರ ಸಮ್ಮತಿ ಬೇಕಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:  ಚಿನ್ನ ವಂಚನೆ ಕೇಸ್! ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.