ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್: ಕಾರಣ ಏನೆಂಬುದೇ ಕುತೂಹಲ
ಬೆಂಗಳೂರಿನ ಚಾಲುಕ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಜಮೀರ್ ಅಹ್ಮದ್ ನಿವಾಸಕ್ಕೆ ಡಿ.ಕೆ. ಸುರೇಶ್ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಜಮೀರ್ ಅಹ್ಮದ್ ಅವರ ಇತ್ತೀಚಿನ ವೈರಲ್ ಆಡಿಯೋ ವಿಚಾರದ ಹಿನ್ನೆಲೆಯಲ್ಲಿ ಈ ಮಾತುಕತೆ ಮಹತ್ವ ಪಡೆದಿದೆ.
ಬೆಂಗಳೂರು, ಜೂನ್ 02: ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಬೆಂಗಳೂರಿನ ಚಾಲುಕ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಮೀರ್ ಅಹ್ಮದ್ ಉಪಮುಖ್ಯಮಂತ್ರಿ (DyCM) ಮತ್ತು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ನಡುವೆ ಇತ್ತೀಚೆಗೆ ದಾವಣಗೆರೆ ದಕ್ಷಿಣ ಉಪಚುನಾವಣೆ ಸಂದರ್ಭದಲ್ಲಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 02, 2026 12:42 PM
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

