ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?
ಇಂಧನ ಮತ್ತು ಅನಿಲದ ಬೆಲೆ ಏರಿಕೆಯ ಪರಿಸ್ಥಿತಿ ಮುಂದುವರಿದರೆ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳ ಗ್ಯಾಸ್ ಬಳಕೆಯ ಮೇಲೆ ವಿಧಿಸಿರುವ ಹೆಚ್ಚುವರಿ ಶುಲ್ಕವು ಅಂತಿಮವಾಗಿ ಗ್ರಾಹಕರ ಮೇಲೆ ಹೊರೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮಾರ್ಚ್ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವರದಿ: ಈರಣ್ಣಾ ಬಸವ, ಟಿವಿ9 ಕನ್ನಡ
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

