ಮಾರ್ಮಿಕವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ರಾಜಕೀಯ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾನದಲ್ಲಿ ಡಿ.ಕೆ. ಸುರೇಶ್ ಮಾಡಿರುವ ಪೋಸ್ಟ್ ಹೊಸ ಚರ್ಚೆ ಹುಟ್ಟುಹಾಕಿದೆ. ಪಾಟೀಲ ಪುಟ್ಟಪ್ಪ ಅವರ ಹೇಳಿಕೆ ಉಲ್ಲೇಖಿಸಿ ಮಾಜಿ ಸಂಸದರು ವ್ಯಕ್ತಪಡಿಸಿರುವ ಅಭಿಪ್ರಾಯದ ಹಿಂದಿನ ಉದ್ದೇಶ ಏನು ಎಂಬ ಕುತೂಹಲ ಉದ್ಭವಿಸಿದೆ.
ಬೆಂಗಳೂರು, ಡಿಸೆಂಬರ್ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಅಧಿಕಾರ ರಾಜಕೀಯದ ನಡುವೆ, ಡಿ.ಕೆ. ಸುರೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಾರ್ಮಿಕ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪಾಟೀಲ ಪುಟ್ಟಪ್ಪನವರ ಹೇಳಿಕೆಯಾದ ‘ಗುರಿಯನ್ನ ಬೇಗ ತಲುಪಬೇಕು ಅನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು’ ಎಂಬ ವಾಕ್ಯವನ್ನು ಡಿ.ಕೆ. ಸುರೇಶ್ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಯಾರನ್ನು ಉದ್ದೇಶಿಸಿದೆ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

