Video: ಅಣ್ಣಾಮಲೈರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ಸಚಿವರ ಪುತ್ರ
ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟದಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರ ಕುತ್ತಿಗೆಗೆ ಪದಕ ಹಾಕಿಕೊಳ್ಳಲು ನಿರಾಕರಿಸಿ, ಅದನ್ನು ಕೈಯಲ್ಲಿ ಸ್ವೀಕರಿಸಿದ್ದಾನೆ. ಸ್ವಲ್ಪ ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು.
ಚೆನ್ನೈ, ಆಗಸ್ಟ್ 26: ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟದಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರ ಕುತ್ತಿಗೆಗೆ ಪದಕ ಹಾಕಿಕೊಳ್ಳಲು ನಿರಾಕರಿಸಿ, ಅದನ್ನು ಕೈಯಲ್ಲಿ ಸ್ವೀಕರಿಸಿದ್ದಾನೆ. ಸ್ವಲ್ಪ ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32 ನೇ ಘಟಿಕೋತ್ಸವದಲ್ಲಿ, ಡಾಕ್ಟರೇಟ್ ವಿದ್ಯಾರ್ಥಿನಿ ಜೀನ್ ಜೋಸೆಫ್ ವೇದಿಕೆಯಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರಿಂದ ಪದವಿ ಪಡೆಯುವ ಬದಲು ಅವರ ಹಿಂದೆ ನಡೆದುಕೊಂಡು ಹೋಗಿ ಕುಲಪತಿಗಳಿಂದ ಪದವಿ ಪಡೆದಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 26, 2025 10:18 AM