AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Dispute: ಮೇಕೆದಾಟು ಯೋಜನೆ ವಿರುದ್ಧ ತುರ್ತು ಚರ್ಚೆಗೆ ಡಿಎಂಕೆ ಆಗ್ರಹ, ರಾಜ್ಯಸಭೆಯಲ್ಲಿ ನಿಲುವಳಿ ಮಂಡನೆ

Cauvery Dispute: ಮೇಕೆದಾಟು ಯೋಜನೆ ವಿರುದ್ಧ ತುರ್ತು ಚರ್ಚೆಗೆ ಡಿಎಂಕೆ ಆಗ್ರಹ, ರಾಜ್ಯಸಭೆಯಲ್ಲಿ ನಿಲುವಳಿ ಮಂಡನೆ

ಹರೀಶ್ ಜಿ.ಆರ್​.
| Edited By: |

Updated on: Aug 05, 2026 | 12:02 PM

Share

ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿದೆ. ಡಿಎಂಕೆ ಸಂಸದರು ನಿಯಮ 267ರ ಅಡಿಯಲ್ಲಿ ತುರ್ತು ಚರ್ಚೆಗೆ ಒತ್ತಾಯಿಸಿದ್ದಾರೆ. ಇದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘನೆ ಎಂದು ಆರೋಪಿಸಿ, ಮೇಕೆದಾಟು ಯೋಜನೆ ತಡೆಯಲು ಮಧ್ಯಸ್ಥಿಕೆ ಮಂಡಳಿ ರಚಿಸುವಂತೆ ಆಗ್ರಹಿಸಿದ್ದಾರೆ.

ನವದೆಹಲಿ, ಆಗಸ್​ಟ್ 5: ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಎಂಕೆ ಪಕ್ಷವು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆಯನ್ನು ಸಲ್ಲಿಸಿದೆ. ಡಿಎಂಕೆ ಸಂಸದ ತಿರುಚಿ ಶಿವ, ನಿಯಮ 267ರ ಅಡಿಯಲ್ಲಿ ಈ ವಿಚಾರವಾಗಿ ತುರ್ತು ಚರ್ಚೆಗೆ ಪಟ್ಟು ಹಿಡಿದಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಡಿಎಂಕೆ, ಮೇಕೆದಾಟು ಯೋಜನೆ ತಡೆಯಲು ಮಧ್ಯಸ್ಥಿಕೆ ಮಂಡಳಿ ರಚಿಸುವಂತೆ ಆಗ್ರಹಿಸಿದೆ.

ತಮಿಳುನಾಡು ಹಲವು ಬಾರಿ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಲೇ ಬಂದಿದೆ. ಈ ಹಿಂದೆ ಸುಪ್ರೀಂ ಕೋರ್ಟ್, ಮೇಕೆದಾಟು ವಿಚಾರವನ್ನು ಕೇಂದ್ರ ಜಲ ಆಯೋಗ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟಪಡಿಸಿತ್ತು. ಕೇಂದ್ರ ಜಲಶಕ್ತಿ ಆಯೋಗ ಕೂಡ ಬೇರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ ಎಂದು ಈಗಾಗಲೇ ಕರ್ನಾಟಕಕ್ಕೆ ಹೇಳಿದೆ. ಮೇಲಿನ ರಾಜ್ಯಗಳು ಅಣೆಕಟ್ಟನ್ನು ನಿರ್ಮಿಸಬಹುದು ಮತ್ತು ತಮಿಳುನಾಡಿಗೆ ಬರಬೇಕಾದ ನೀರಿನ ಪಾಲನ್ನು ಬಿಟ್ಟರೆ ಸಾಕು ಎಂದು ಸ್ಪಷ್ಟಪಡಿಸಿದೆ. ಈ ಸ್ಪಷ್ಟೀಕರಣದ ನಂತರವೂ ಡಿಎಂಕೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದೀಗ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆಯ ಮೂಲಕ ಚರ್ಚೆಗೆ ಒತ್ತಾಯಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More