‘ನನಗೂ ಸುದೀಪ್​​ಗೂ ತಂದಿಡಬೇಡಿ’; ಮನವಿ ಮಾಡಿಕೊಂಡ ರವಿಚಂದ್ರನ್

Updated on: Jul 19, 2023 | 4:00 PM

‘ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ ಸುದೀಪ್ ಮಧ್ಯೆ ತಂದಿಡಬೇಡಿ’ ಎಂದು ರವಿಚಂದ್ರನ್ ಕೋರಿದ್ದಾರೆ.

ನಿರ್ಮಾಪಕ ಎಂಎನ್​ ಕುಮಾರ್ (MN Kumar) ಹಾಗೂ ಸುದೀಪ್ ಮಧ್ಯೆ ಮನಸ್ತಾಪ ಉಂಟಾಗಿದೆ. ಸುದೀಪ್ ಚಿತ್ರಗಳನ್ನು ಕುಮಾರ್ ನಿರ್ಮಾಣ ಮಾಡಿದ್ದರು. ಇಬ್ಬರ ಮಧ್ಯೆ ಗೆಳೆತನ ಇತ್ತು. ಆದರೆ, ಈಗ ಈ ಗೆಳೆತನ ಹಾಳಾಗಿದೆ. ಎಂಎನ್ ಕುಮಾರ್ ಫಿಲ್ಮ್ ಚೇಂಬರ್ ಮೊರೆ ಹೋದರೆ, ಸುದೀಪ್ (Sudeep) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಮಧ್ಯೆ ಮೂಡಿರುವ ಮನಸ್ತಾಪವನ್ನು ಪರಿಹರಿಸಲು ರವಿಚಂದ್ರನ್ ಮುಂದಾಗಿದ್ದಾರೆ. ‘ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ- ಸುದೀಪ್ ಮಧ್ಯೆ ತಂದಿಡಬೇಡಿ’ ಎಂದು ರವಿಚಂದ್ರನ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More