ಚಿಕ್ಕಮಗಳೂರು: ರೋಗಿ ಸ್ಟ್ರೆಚರ್ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ
ರೋಗಿಯೊಬ್ಬರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡದೆ ವೈದ್ಯರು ಮೊಬೈಲ್‌ನಲ್ಲಿ ಹರಟುತ್ತಾ ಕುಳಿತ ಘಟನೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊನೆಗೆ ರೋಗಿಗೆ ತಡವಾಗಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದಲ್ಲೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ ಚಿಕಿತ್ಸೆ ನೀಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ರೋಗಿ ಉಸಿರಾಡಲು ಪರದಾಡುತ್ತಿದ್ದಾಗ, ಅಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂಬ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆದ ನಂತರ ಆಸ್ಪತ್ರೆಯ ಸಿಬ್ಬಂದಿ ಎಚ್ಚೆತ್ತುಕೊಂಡು ಮಂಜುನಾಥ್‌ಗೆ ಚಿಕಿತ್ಸೆ ನೀಡಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ ಆಗಾಗಲೇ ತಡವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ. ಈ ಘಟನೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದ್ದು, ಜಿಲ್ಲಾಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತು ಪರಿಸ್ಥಿತಿಯಲ್ಲೂ ರೋಗಿಗೆ ಚಿಕಿತ್ಸೆ ನೀಡದಿರುವುದು ಅಮಾನವೀಯ ನಡೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್ ಮಾತು
ರಾಜಶೇಖರ್ ತಾಯಿಗೆ ಡಿಕೆ ಶಿವಕುಮಾರ್ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು

