ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್ಇಡಿ ಬಲ್ಬ್!
ಮಡಿಕೇರಿಯಲ್ಲಿ ಎಂಟು ತಿಂಗಳ ಮಗುವೊಂದು ಆಟವಾಡುತ್ತಾ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದೆ. ಮಗು ತೀವ್ರವಾಗಿ ಅಳಲಾರಂಭಿಸಿದಾಗ ಗಾಬರಿಗೊಂಡ ಪೋಷಕರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಲ್ಬ್ ಅನ್ನು ಶಸ್ತ್ರಚಿಕಿತ್ಸೆ ಇಲ್ಲದೆ ಯಶಸ್ವಿಯಾಗಿ ಹೊರತೆಗೆದರು. ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಪೋಷಕರು ಹಾಗೂ ವೈದ್ಯರು ನಿಟ್ಟುಸಿರು ಬಿಟ್ಟಿದ್ದಾರೆ.
ಮಡಿಕೇರಿ, ಜೂನ್ 27: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಎಂಟು ತಿಂಗಳ ಮಗುವೊಂದು ಆಟವಾಡುತ್ತಾ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದೆ. ಸಕಾಲಿಕ ಚಿಕಿತ್ಸೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಇಡಿ ಬಲ್ಬ್ ನುಂಗಿದ ಬಳಿಕ ಮಗು ವಿಪರೀತವಾಗಿ ಅಳಲಾರಂಭಿಸಿದ್ದು, ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಮೊದಲು ಎಕ್ಸ್ ರೇ ಮಾಡಿದರು. ಗಂಟಲಿನಲ್ಲಿ ಲೋಹದ ವಸ್ತುವೊಂದು ಇರುವುದು ಪತ್ತೆಯಾಗಿದ್ದು, ಲ್ಯಾರಿಂಗೋಸ್ಕೋಪ್ ಪರೀಕ್ಷೆ ನಡೆಸಿದಾಗ ಅದು ಎಲ್ಇಡಿ ಬಲ್ಬ್ ಎಂದು ದೃಢಪಟ್ಟಿತು. ಇಎನ್‌ಟಿ ತಜ್ಞೆ ಡಾ. ರಾಜಶ್ರೀ ನೇತೃತ್ವದ ವೈದ್ಯರ ತಂಡವು ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೆ ಬಲ್ಬ್ ಅನ್ನು ಯಶಸ್ವಿಯಾಗಿ ಹೊರತೆಗೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
