ಬಳ್ಳಾರಿ: ಬಿಮ್ಸ್ನ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಚಿಕಿತ್ಸೆ
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ವೈದ್ಯರು ಮೊಬೈಲ್ ಟಾರ್ಚ್‌ಗಳ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಘಟನೆ ಕುರಿತು ಸಮಗ್ರ ವರದಿ ಕೇಳಿದೆ.
ಬಳ್ಳಾರಿ, ಫೆಬ್ರವರಿ 16: ಬಳ್ಳಾರಿಯ ಬಿಮ್ಸ್ (Ballari Bims Hospital) ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನ (Trama Care Center) ಎಮರ್ಜೆನ್ಸಿ ವಾರ್ಡ್ನಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ಯಾಧುನಿಕ ಸೌಲಭ್ಯವಿರುವ ಟ್ರಾಮಾ ಕೇರ್ ಸೆಂಟರ್ನ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಟ್ರಾಮಾ ಕೇರ್ ಸೆಂಟರ್ ಸೂಪರಿಡೆಂಡ್ಗೆ ಸೂಚನೆ ನೀಡಿದೆ.
Published on: Feb 16, 2025 11:07 AM
Loading...
Unable to load recommendations.
Follow Us