ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಆತಂಕದಲ್ಲಿ ಸ್ಥಳೀಯರು

Edited By:

Updated on: Oct 24, 2026 | 4:56 PM

ದೊಡ್ಡಬಳ್ಳಾಪುರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವೆಡೆ ಮತ್ತೆ ಭೂಕಂಪನ ಸಂಭವಿಸಿದೆ. ದೊಡ್ಡಬಳ್ಳಾಪುರದ ಲಘುಮೇನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಬುಧವಾರ ನಸುಕಿನ ಜಾವ 3 ಗಂಟೆಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ. ಸರಣಿ ಕಂಪನಗಳಿಂದಾಗಿ ಗ್ರಾಮಸ್ಥರು ಮನೆಗಳಿಂದ ಹೊರಬಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ ಎರಡು ದಿನಗಳಿಂದ ಭೂಕಂಪನದ ಅನುಭವವಾಗುತ್ತಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ದೊಡ್ಡಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬುಧವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಭೂಮಿ ಕಂಪಿಸಿದೆ. ನಿನ್ನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವ್ಯಾಪ್ತಿಯಲ್ಲೂ ಭೂ ಕಂಪನ ಉಂಟಾಗಿದ್ದು ವರದಿಯಾಗಿದೆ.

ರಿಕ್ಟರ್ ಮಾಪಕದಲ್ಲಿ ಈ ಕಂಪನದ ತೀವ್ರತೆ 2.9ರಷ್ಟು ದಾಖಲಾಗಿದೆ ಎಂದು ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ. ಭೂಮಿಯಿಂದ ಸುಮಾರು 5 ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದೆ. ಸುಮಾರು 42 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅನಿರೀಕ್ಷಿತ ಕಂಪನದಿಂದಾಗಿ ರಾತ್ರಿಯಿಡೀ ನಿದ್ದೆ ಕೆಟ್ಟು, ಮನೆಗಳಿಂದ ಹೊರಬಂದ ಜನತೆ ಭಯಭೀತರಾಗಿದ್ದಾರೆ.

ಭೂಕಂಪನದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಈ ವಿಚಾರ ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗಿದ್ದು, ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಸಮಗ್ರ ಚರ್ಚೆ ನಡೆಸುವಂತೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಂತೆ ಅವರಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 24, 2026 04:46 PM
Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More