ದೊಡ್ಡಬಳ್ಳಾಪುರದಲ್ಲಿ ಅಪರೂಪದ ಘಟನೆ: ಒಂದೇ ಬಾರಿಗೆ 4 ಮರಿಗಳಿಗೆ ಜನ್ಮ ನೀಡಿದ ನಾಟಿ ಕುರಿ

Edited By:

Updated on: Sep 08, 2026 | 9:39 AM

ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಗ್ರಾಮದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರೈತ ಗೋಪಾಲಕೃಷ್ಣ ಅವರ ನಾಟಿ ಕುರಿಯು ಒಂದೇ ಸೂಲಿನಲ್ಲಿ ನಾಲ್ಕು ಆರೋಗ್ಯಕರ ಮರಿಗಳಿಗೆ ಜನ್ಮ ನೀಡಿದೆ. ಸಾಮಾನ್ಯವಾಗಿ ಕುರಿಗಳು ಒಂದೋ ಎರಡೋ ಮರಿಗಳಿಗೆ ಜನ್ಮ ನೀಡುತ್ತವೆ. ಈ ವಿಶೇಷ ಪ್ರಸವ ಸ್ಥಳೀಯ ಕುರಿ ಸಾಕಾಣಿಕೆದಾರರು ಮತ್ತು ಗ್ರಾಮಸ್ಥರಲ್ಲಿ ಅಚ್ಚರಿ ಹಾಗೂ ಸಂತಸ ಮೂಡಿಸಿದೆ.

ದೊಡ್ಡಬಳ್ಳಾಪುರ, ಸೆ.8 : ಸಾಮಾನ್ಯವಾಗಿ ಕುರಿಗಳು ಒಂದೇ ಬಾರಿಗೆ ಒಂದು ಅಥವಾ ಎರಡು ಮರಿಗಳಿಗೆ ಜನ್ಮ ನೀಡುವುದು ಸಹಜ. ಆದರೆ ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಗ್ರಾಮದಲ್ಲಿ ಅಪರೂಪದಲ್ಲೇ ಅಪರೂಪ ಎನ್ನುವಂತೆ ನಾಟಿ ಕುರಿಯೊಂದು ಒಂದೇ ಬಾರಿಗೆ ನಾಲ್ಕು ಆರೋಗ್ಯಕರ ಮರಿಗಳಿಗೆ ಜನ್ಮ ನೀಡಿದೆ. ಗ್ರಾಮದ ರೈತ ಗೋಪಾಲಕೃಷ್ಣ ಅವರಿಗೆ ಸೇರಿದ ನಾಟಿ ಕುರಿಯೇ ಈ ಅಪರೂಪದ ಪ್ರಸವ ಮಾಡಿದ್ದು, ಸ್ಥಳೀಯರಲ್ಲಿ ಹಾಗೂ ಕುರಿ ಸಾಕಾಣಿಕೆದಾರರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕುರಿಯು ಒಂದೇ ಸೂಲಿನಲ್ಲಿ ಎರಡು ಗಂಡು ಮತ್ತು ಎರಡು ಹೆಣ್ಣು ಮರಿಗಳಿಗೆ ಜನ್ಮ ನೀಡಿದೆ. ಒಂದೇ ಬಾರಿಗೆ ನಾಲ್ಕು ಮರಿಗಳು ಹುಟ್ಟಿದ್ದರಿಂದ ರೈತ ಗೋಪಾಲಕೃಷ್ಣ ಅವರ ಕುಟುಂಬದಲ್ಲಿ ಸಂತಸ ಮನೆಮಾಡಿದೆ. ಈ ಅಪರೂಪದ ವಿದ್ಯಮಾನದ ವಿಷಯ ತಿಳಿಯುತ್ತಿದ್ದಂತೆ ಬನವತಿ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಕುರಿ ಸಾಕಾಣಿಕೆದಾರರು ಆಗಮಿಸಿ ಕುರಿ ಮತ್ತು ಮರಿಗಳನ್ನು ಆಶ್ಚರ್ಯದಿಂದ ವೀಕ್ಷಿಸುತ್ತಿದ್ದಾರೆ. ಸಾಮಾನ್ಯ ನಾಟಿ ತಳಿಯ ಕುರಿಯೊಂದು ಯಾವುದೇ ತೊಂದರೆಯಿಲ್ಲದೆ ನಾಲ್ಕು ಮರಿಗಳಿಗೆ ಜನ್ಮ ನೀಡಿರುವುದು ಸ್ಥಳೀಯವಾಗಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Sep 08, 2026 09:37 AM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More