AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ

ನವೀನ್ ಕುಮಾರ್ ಟಿ
| Edited By: |

Updated on:Jan 01, 2026 | 7:16 AM

Share

ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯಲ್ಲಿ ಅನುಮತಿಯಿಲ್ಲದೆ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 40-50 ಯುವಕರು ಭಾಗಿಯಾಗಿದ್ದ ಈ ಪಾರ್ಟಿ ಬಗ್ಗೆ ಶಬ್ದ ಮಾಲಿನ್ಯದ ದೂರು ಬಂದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಫಾರ್ಮ್‌ಹೌಸ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪೊಲೀಸರು ಪಾರ್ಟಿಗೆ ಬ್ರೇಕ್ ಹಾಕಿ, ಸ್ಥಳದಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಫಾರ್ಮ್‌ಹೌಸ್ ಮಾಲೀಕ ಮತ್ತು ಪಾರ್ಟಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 01, 2026 07:13 AM
Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More