ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು: ವಿಡಿಯೋ ನೋಡಿ
ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ನಡೆದಿದೆ.
ಮುಖ್ಯಾಂಶಗಳು
- ಪ್ರಚಾರಕ್ಕೆ ಹೋದ ನಿಖಿಲ್ ಕುಮಾರಸ್ವಾಮಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
- ರಾಮನಗರದ ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ಪ್ರಚಾರಕ್ಕೆ ಹೋದಾಗ ನಡೆದ ಘಟನೆ
- ಸಮಾಧಾನದಿಂದಲೇ ಮಹಿಳೆಯರ ಸಮಸ್ಯೆ ಆಲಿಸಿದ ನಿಖಿಲ್, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ
ರಾಮನಗರ: ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಓಟ್ ಕೊಡಲ್ಲ ಎಂದು ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು(ಏಪ್ರಿಲ್ 10) ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ಪ್ರಚಾರಕ್ಕೆ ಬಂದಾಗ ಈ ಘಟನೆ ನಡೆದಿದೆ.
ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ. ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತಹಾಕಲ್ಲ ಎಂದು ನಿಖಿಲ್ಗೆ ಮಹಿಳೆಯರು ಕ್ಲಾಸ್ ತೆಗೆದುಕೊಂಡರು. ಈ ವೇಳೆ ಸಮಾಧಾನದಿಂದಲೇ ಮಹಿಳೆಯರ ಸಮಸ್ಯೆ ಆಲಿಸಿದ ನಿಖಿಲ್, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
Published On - 2:32 pm, Mon, 10 April 23




