ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು: ವಿಡಿಯೋ ನೋಡಿ

ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ನಡೆದಿದೆ.

ರಾಮನಗರ: ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಓಟ್ ಕೊಡಲ್ಲ ಎಂದು ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು(ಏಪ್ರಿಲ್​ 10) ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ಪ್ರಚಾರಕ್ಕೆ ಬಂದಾಗ ಈ ಘಟನೆ ನಡೆದಿದೆ.

ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ. ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತಹಾಕಲ್ಲ ಎಂದು ನಿಖಿಲ್​ಗೆ ಮಹಿಳೆಯರು ಕ್ಲಾಸ್ ತೆಗೆದುಕೊಂಡರು. ಈ ವೇಳೆ ಸಮಾಧಾನದಿಂದಲೇ ಮಹಿಳೆಯರ ಸಮಸ್ಯೆ ಆಲಿಸಿದ ನಿಖಿಲ್, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

Published On - 2:32 pm, Mon, 10 April 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us