AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ಗೃಹಿಣಿಯರು ಏನಂದ್ರು ನೋಡಿ

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ಗೃಹಿಣಿಯರು ಏನಂದ್ರು ನೋಡಿ

ಗಂಗಾಧರ​ ಬ. ಸಾಬೋಜಿ
|

Updated on:Jun 07, 2026 | 1:52 PM

Share

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 29 ಏರಿಕೆ ಆಗಿದೆ. ಕರ್ನಾಟಕದ ಗೃಹಿಣಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುದ್ಧದ ಪರಿಣಾಮ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಸಿಲಿಂಡರ್ ತಡವಾಗಿ ವಿತರಣೆಯಿಂದ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಜೂನ್​ 07: ಬೆಲೆ ಏರಿಕೆಯಿಂದ ಕಂಲಾಗಿ ಹೋಗ್ತಿರುವ ಸಾಮಾನ್ಯ ಜನರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರ ಅಡುಗೆ ಮನೆಗೆ ಈಗ ನೇರವಾಗಿ ಬೆಂಕಿ ಬಿದ್ದಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 29 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಇದು ಜನ ಸಾಮಾನ್ಯರಿಗೆ ದೊಡ್ಡ ಶಾಕ್​ ಉಂಟುಮಾಡಿದೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ 89 ರೂಪಾಯಿ ಹೆಚ್ಚಳವಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಒಂದು ಅಥವಾ ಎರಡು ತಿಂಗಳುಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಲೆ ಹೆಚ್ಚಾಗಿರುವುದರಿಂದ ಮನೆಯಲ್ಲಿ ಅಡುಗೆ ಮಾಡುವುದು ಅನಿವಾರ್ಯವಾಗಿದೆ. ಆದರೆ, ಗ್ಯಾಸ್ ಬೆಲೆ ಏರಿಕೆಯು ಅಡುಗೆ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಬೇಳೆ, ಎಣ್ಣೆ, ಅಕ್ಕಿಯಂತಹ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 07, 2026 01:52 PM

Follow Us