ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಡೊನಾಲ್ಡ್​ ಟ್ರಂಪ್

|

Updated on: Jan 21, 2025 | 12:41 PM

ಅಮೇರಿಕದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್, ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ನಿ ಮೆಲಾನಿಯಾ ಜೊತೆ ಕೇಕ್ ಕತ್ತರಿಸಿ ನೃತ್ಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ರಂಪ್ ಎಲ್ವಿಸ್ ಹಾಡಿಗೆ ನೃತ್ಯ ಮಾಡಿದ್ದು, ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಅವರ ಪತ್ನಿ ಕೂಡ ವೇದಿಕೆ ಹಂಚಿಕೊಂಡಿದ್ದಾರೆ.

ಅಮೆರಿಕದಲ್ಲಿ ಎರಡನೇ ಬಾರಿಗೆ ಡೊನಾಲ್ಡ್​ ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಟ್ರಂಪ್ ಪದಗ್ರಹಣದ ಬಳಿಕ ವಾಷಿಂಗ್ಟನ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಪತ್ನಿ ಮೆಲಾನಿಯಾ ಜತೆ ಭಾಗವಹಿಸಿದ್ದಾರೆ. ಈ ವೇಳೆ ವೇದಿಕೆಗೆ ಆಗಮಿಸಿದ ಡೊನಾಲ್ಡ್ ಟ್ರಂಪ್ ನೆರೆದಿದ್ದ ಸಾವಿರಾರು ಜನರ ಮುಂದೆ ಕೇಕ್​​ ಕತ್ತರಿಸುತ್ತಾ ಡ್ಯಾನ್ಸ್​​ ಮಾಡಿದ್ದಾರೆ. ಸದ್ಯ ಟ್ರಂಪ್​ ಸಂಭ್ರಮದಿಂದ ಕುಣಿದು ಕುಪ್ಪಳಿಸಿರುವ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಕೈಯಲ್ಲಿ ಮಿಲಿಟರಿ ಖಡ್ಗ ಹಿಡಿದು ಕೇಕ್​ ಕತ್ತರಿಸಲು ಸಜ್ಜಾಗಿರುವ ಟ್ರಂಪ್​​ ಎಲ್ವಿಸ್ ಅವರ ಅಮೇರಿಕನ್ ಟ್ರೈಲಾಜಿ ಹಾಡಿಗೆ ಸಖತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಜೊತೆಗೆ ಪ್ರಥಮ ಮಹಿಳೆ ಮೆನಾಲಿಯಾ ಟ್ರಂಪ್ ಕೂಡ ಸಂಗೀತಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಅವರ ಪತ್ನಿ ಉಷಾ ವಾನ್ಸ್ ಕೂಡ ವೇದಿಕೆ ಹಂಚಿಕೊಂಡಿದ್ದಾರೆ.

Published on: Jan 21, 2025 12:32 PM