SA20 2025: ಅದ್ಭುತ ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ

SA20 2025: ಅದ್ಭುತ ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ

ಝಾಹಿರ್ ಯೂಸುಫ್
|

Updated on: Jan 27, 2025 | 10:53 AM

Joburg Super Kings vs Sunrisers Eastern Cape: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 19 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. 119 ರನ್​ಗಳ ಸುಲಭ ಗುರಿ ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು 14 ಓವರ್​ಗಳಲ್ಲಿ 119 ರನ್ ಬಾರಿಸಿ 9 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ.

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಅದ್ಭುತ ರನ್ನಿಂಗ್ ಕ್ಯಾಚ್ ಹಿಡಿದು ಡೊನೊವನ್ ಫೆರೇರಾ ಎಲ್ಲರನ್ನು ಚಕಿತಗೊಳಿಸಿದ್ದಾರೆ. ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಈಸ್ಟರ್ನ್ ಕೇಪ್ ತಂಡವು ನಿರೀಕ್ಷಿತ ಆರಂಭ ಪಡೆಯಲಿಲ್ಲ. ಕೇವಲ 115 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಷ್ಟಕ್ಕೆ ಸಿಲುಕಿದ್ದ ವೇಳೆ ಬೇಯರ್ಸ್ ಸ್ವಾನೆಪೋಯೆಲ್ ಕಣಕ್ಕಿಳಿದಿದ್ದರು.

19ನೇ ಓವರ್​ನ 4ನೇ ಎಸೆತದಲ್ಲಿ ಬೇಯರ್ಸ್ ಸ್ವಾನೆಪೋಯೆಲ್ ಡೀಪ್ ಸ್ಕ್ವೇರ್​ನತ್ತ ಭರ್ಜರಿಯಾಗಿ ಬಾರಿಸಿದ್ದಾರೆ. ಚೆಂಡು ಇನ್ನೇನು ಬೌಂಡರಿ ಲೈನ್ ದಾಟಿ ಸಿಕ್ಸ್ ಆಗಲಿದೆ ಅನ್ನುವಷ್ಟರಲ್ಲಿ ಓಡಿ ಬಂದ ಡೊನೊವನ್ ಫೆರೇರಾ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು. ಇದೀಗ ಡೊನೊವನ್ ಫೆರೇರಾ ಅವರ ಅದ್ಭುತ ರನ್ನಿಂಗ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 19 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. 119 ರನ್​ಗಳ ಸುಲಭ ಗುರಿ ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು 14 ಓವರ್​ಗಳಲ್ಲಿ 119 ರನ್ ಬಾರಿಸಿ 9 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ.