ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಇದೇ ವಿಚಾರ ಕೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಾವಾಗಲಿ ಅಥವಾ ಡಿಕೆ ಶಿವಕುಮಾರ್ ಅವರಾಗಲಿ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಸಿಎಂ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆಯಿತು. ಕಳೆದ ಮೂರು ತಿಂಗಳಿಂದಲೂ ಇದೇ ವಿಷಯವನ್ನು ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು.
ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ ಖರ್ಚಿನಲ್ಲಿದ್ದರೆ ವಿವಾದ ಏಕೆ ಎಂದು ಪ್ರಶ್ನಿಸಿದರು. ಆದರೆ, ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಯಿಂದ ಅವರು ಸಿಡಿಮಿಡಿಗೊಂಡರು.
‘ನಾನು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪಕ್ಷದ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ, ಅದನ್ನು ನಾವು ತಪ್ಪದೆ ಪಾಲಿಸುತ್ತೇವೆ. ಇದು ಸಂಪೂರ್ಣವಾಗಿ ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದು ಸಿದ್ದರಾಮಯ್ಯ ಹೇಳಿದರು.
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


