ಮೈಸೂರು ಘಟನೆಯಲ್ಲಿ ಪೊಲೀಸರೇ ತಪ್ಪಿತಸ್ಥರಾಗಿ ಶಿಕ್ಷೆಗೊಳಗಾದರೆ ಆಶ್ಚರ್ಯವಿಲ್ಲ: ಆರ್ ಅಶೋಕ, ವಿಪಕ್ಷ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Feb 14, 2025 | 2:18 PM

ಕೇವಲ ಮುಸಲ್ಮಾನರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರ ಪೊಲೀಸರ ಆತ್ಮಸ್ಥೈರ್ಯ ಕುಗ್ಗುವಂತೆ ಮಾಡಿದೆ, ಒಬ್ಬ ಸಚಿವ ಪೊಲೀಸರನ್ನು ಏಕವಚನದಲ್ಲಿ ಸಂಬೋಧಿಸುತ್ತಾನೆ, ಸಚಿವನಾದವನೇ ಹಾಗೆ ಮಾತಾಡಿದರೆ ಜನಸಾಮಾನ್ಯರಿಗೆ ಪೊಲೀಸರ ಮೇಲಿನ ಭಯ ಎಲ್ಲಿ ಉಳಿಯುತ್ತದೆ? ಅವರೂ ಪೊಲೀಸರಿಗೆ ಮನಬಂದಂತೆ ಮಾತಾಡಲು ಶುರುಮಾಡುತ್ತಾರೆ ಎಂದು ಅಶೋಕ ಹೇಳಿದರು.

ಹಾಸನ: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ ಅವರು ಮೈಸೂರು ಘಟನೆ ಹಿನ್ನೆಲೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಪೊಲೀಸ್ ವ್ಯವಸ್ಥೆಗೆ ಸಿದ್ದರಾಮಯ್ಯ ಸರ್ಕಾರದ ಮೇಲೆ ವಿಶ್ವಾಸ ಹೊರಟುಹೋಗಿದೆ, ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣವನ್ನು ಸರ್ಕಾರ ಮುಚ್ಚಿಹಾಕಿದ್ದು ಅವರಿಗೆ ಚೆನ್ನಾಗಿ ಗೊತ್ತಿದೆ, ಮೈಸೂರಲ್ಲೂ ಅಪರಾಧಿಗಳನ್ನು ಹಿಡಿದು ಒಳಹಾಕಿದರೆ ಸರಕಾರವೇ ಅವರ ಪರ ನಿಂತು ಬಿಡಿಸುತ್ತದೆ ಮತ್ತು ಕರ್ತವ್ಯ ನಿರ್ವಹಿಸಿದ ಪೊಲೀಸರೇ ಅಪರಾಧಿಗಳಾಗಿ ಬಿಡುತ್ತಾರೆ, ಕೆಲವರನ್ನು ಸಸ್ಪೆಂಡ್ ಇಲ್ಲವೇ ಟ್ರಾನ್ಸ್​​ಫರ್ ಕೂಡ ಮಾಡಲಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕರ್ನಾಟಕ ಬಿಜೆಪಿ ಭಿನ್ನಮತಕ್ಕೆ ಬ್ರೇಕ್​ ಹಾಕಲು ಅಖಾಡಕ್ಕಿಳಿದ ವರಿಷ್ಠರು: ಅಶೋಕ್​ ಜತೆ ರಾಜ್ಯ ಸಹ ಉಸ್ತುವಾರಿ ಮಹತ್ವದ ಸಭೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.